
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ಶಾಲಾ ಶಿಕ್ಷಣ ಇಲಾಖೆ, ಭಾರತ ಸೇವಾದಳ ಜಿಲ್ಲಾ ಸಮಿತಿ ದಕ್ಷಿಣ ಕನ್ನಡ ಭಾರತ ಸೇವಾದಳ ತಾಲೂಕು ಸಮಿತಿ, ಸರಕಾರಿ ಪ್ರೌಢಶಾಲೆ ಎಣ್ಮೂರು ಮುರುಳ್ಯ ಸುಂದರ ನಗರ ಸುಳ್ಯ ತಾಲೂಕಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ 2024-25 ರಲ್ಲಿ ಕುಂಭಶ್ರೀ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿರುತ್ತಾರೆ.
ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶುಭ ಸೇವಾದಳದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್. ಮತ್ತು ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.