ಧರ್ಮಸ್ಥಳ:1008 ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳನ್ನು ಫೆ. 3ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗುರುದೇವ ಮಠದಲ್ಲಿ ಭೇಟಿ ನೀಡಿ ಆಶೀರ್ವಾದ ಪಡೆದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರವೀಣ್ ಫೆರ್ನಾಂಡಿಸ್, ರಜತ್ ಗೌಡ ರಮಾನಂದ ಸಾಲಿಯಾನ್, ಪ್ರಶಾಂತ್ ಕೊಕ್ರಾಡಿ ಮೊದಲಾದವರು ಉಪಸ್ಥಿತರಿದ್ದರು.