ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆಯಲ್ಲಿ ಫೆ. 4ರಂದು ಎ. ಜೆ. ಆಸ್ಪತ್ರೆಯ ಡಾ. ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಕುಂಭಶ್ರೀ ವಿದ್ಯಾ ಸಂಸ್ಥೆಯ 6ನೇ, 7ನೇ, ಪ್ರೌಢಶಾಲಾ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.
ಶಾಲಾ ಸಂಚಾಲಕ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಮೇಡಂ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ವರದಿ: ಭವಾನಿ ದಿವ್ಯ