ಬೆಳ್ತಂಗಡಿ: ಡಿ. ವಿರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಬದುಕು ಕಟ್ಟೋಣ ಬನ್ನಿ ಸೇವಾ ಟ್ಟಸ್ಟ್ ಇವರ ನೇತ್ರತ್ವದಲ್ಲಿ ಶ್ರೀ ಧ. ಮಂ. ಕಾಲೇಜು (ಸ್ವಾಯತ್ತ), ಶ್ರೀ ಧ. ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಗಳು ಉಜಿರೆ, ಶ್ರೀ ಧ. ಮಂ. ಸ್ಟೋಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ವ್ಯವಸ್ಥಾಪನಾ ಸಮಿತಿ ಅನಂತಪದ್ಮನಾಭ ದೇವಸ್ಥಾನ, ಅನಂತೋಡಿ, ಬೆಳಾಲು ಇದರ ಸಹಯೋಗದಲ್ಲಿ ಫೆ. 9ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ವಠಾರದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ ವಿದ್ಯಾರ್ಥಿಗಳಲ್ಲಿ ಭತ್ತದ ಕೃಷಿ ಅರಿವು ಮೂಡಿಸಲು ಮಾಡಿದ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ ಸುಮಾರು ಸಾವಿರಕ್ಕೂ ಅಧಿಕ ಯುವಜನತೆಯಿಂದ ಕಟಾವು ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಸೋನಿಯ ಯಶೋವರ್ಮ ಉದ್ಟಾಟಿಸಲಿದ್ದು, ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ಡಟ್ನಾಯ, ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ತಹಶೀಲ್ದಾರ್ ಪೃಥ್ವಿ ಸಾನಿಕಂ, ಧ. ಗ್ರಾ. ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್. ಎಸ್., ರುಡ್ ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ. ಪಿ. ವಿಜಯಕುಮಾರ್, ಉಜಿರೆ ಎಸ್. ಡಿ. ಎಂ ಕಾಲೇಜಿನ ಪ್ರಾಂಶುಪಾಲ ಬಿ. ಎ. ಕುಮಾರ್ ಹೆಗ್ಡೆ, ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೊ. ಪೂರನ್ ವರ್ಮ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ಸೇವಾ ಟ್ಟಸ್ಟ್ ನ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು, ಸಾವಿರಕ್ಕೂ ಅಧಿಕ ಯುವಜನತೆ ಭಾಗವಹಿಸಲಿದ್ದಾರೆ. ಎಂದು ಬದುಕು ಕಟ್ಟೋಣ ಸಂಘದ ಸಂಚಾಲಕರಾದ ಮೋಹನ್ ಕುಮಾರ್, ರಾಜೇಶ್ ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾರ್ಮಾಡಿ ಸುತ್ತಮುತ್ತ ಭಾಗದಲ್ಲಿ ನೆರೆ ಹಾವಳಿ ಬಂದ ಸಂದರ್ಭದಲ್ಲಿ ನೂರಾರು ಕುಟುಂಬಗಳಿಗೆ ಆಸರೆಯಾದ ಬದುಕು ಕಟ್ಟೋಣ ತಂಡ ಬಳಿಕ ಕೊರೋನ ಸಂದರ್ಭದಲ್ಲಿ ತಾಲೂಕಿನ ಸಾವಿರಾರು ಕೋರೊನ ಪೀಡಿತರಿಗೆ ನೆರವನ್ನು ನೀಡಿದ್ದಲ್ಲದೆ ಬೃಹತ್ ರಕ್ತದಾನವನ್ನು ಮಾಡುವ ಮೂಲಕ ಆರೋಗ್ಯ ಸೇವೆಯನ್ನು ಮಾಡುತ್ತಿದೆ. ಬಳಿಕ ಸ. ಶಾಲೆಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡ ಈ ತಂಡ 25ಕ್ಕೂ ಅಧಿಕ ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ಸಂಕಲ್ಪ ಮಾಡಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಕರ್ಯ, ವಿಮಾ ಯೋಜನೆಯನ್ನು ಮಾಡುವ ಮೂಲಕ ಶಿಕ್ಷಣದ ನೆರವನ್ನು ನೀಡುವುದಲ್ಲದೆ ಸರ್ಕಾರಿ ಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡುವುದು, ಕ್ರೀಡಾ ತರಬೇತಿಯನ್ನು ನೀಡುತ್ತಿದೆ.ಇದೀಗ ಅಳಿವಿನ ಅಂಚಿನಲ್ಲಿರುವ ಭತ್ತದ ಕೃಷಿಗೆ ಪ್ರೋತ್ಸಾಹ ನೀಡಬೇಕು ಮತ್ತು ವಿದ್ಯಾರ್ಥಿಗಳಲ್ಲಿ ಭತ್ತದ ಕೃಷಿ ಅರಿವು ಬೇಕು ಎಂಬ ಉದ್ದೇಶದಿಂದ ಭತ್ತದ ಕೃಷಿ ಕಾರ್ಯಕ್ರಮವನ್ನು ಬದುಕು ಕಟ್ಟೋಣ ತಂಡ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದೆ.