ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಫೆ. 7ರಂದು ಸಂಜೆ ಗಂಟೆ 6.30ಕ್ಕೆ ಚಾರ್ಮಾಡಿ ಗ್ರಾಮದ ವಳಸರಿಯಲ್ಲಿ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘ ಚಾರ್ಮಾಡಿ ಇದರ ಅಧ್ಯಕ್ಷರು, ಉಜಿರೆ ಜಿಲ್ಲಾ ಪಂಚಾಯತ್ ಕ್ಷೇತ್ರದ ವಲಯ ಸಂಚಾಲಕ ಯಶೋಧರ ಪೂಜಾರಿ ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

ವೇದಿಕೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷ ಸನತ್ ಕೋಟ್ಯಾನ್, ಚಿಬಿದ್ರೆ ಗುರು ನಾರಾಯಣ ಸೇವಾ ಸಂಘದ ಅಧ್ಯಕ್ಷ ರತ್ನಾಕರ ಪೂಜಾರಿ ಅಂತರ, ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ ಇದರ ಕೋಶಾಧಿಕಾರಿ ಸದಾಶಿವ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಚಾರ್ಮಾಡಿ ಇದರ ಅಧ್ಯಕ್ಷೆ ಕೇಶವತಿ ಭೀಮಂಡೆ, ಉಪಸ್ಥಿತರಿದ್ದರು.

ರತ್ನಾಕರ ಪೂಜಾರಿ ಚಾರ್ಮಾಡಿ, ಉಮೇಶ್ ಪೂಜಾರಿ ಚಾರ್ಮಾಡಿ, ಸತೀಶ್ ಚಾರ್ಮಾಡಿ, ದಯಾನಂದ ವಲಸಾರಿ, ಶ್ರೀಧರ ಪೂಜಾರಿ, ಉಮೇಶ್ ಭೀಟಿಗೆ, ನಿಶಾಂತ್ ಭೀಮಂಡೆ ಹಾಗೂ ಗ್ರಾಮಸ್ಥರು ಸೇರಿದ್ದರು.

ಗುರು ನಾರಾಯಣಸ್ವಾಮಿ ಸೇವಾ ಸಂಘ ಚಾರ್ಮಾಡಿನ ಪ್ರಧಾನ ಕಾರ್ಯದರ್ಶಿ ರಾಜೇಶ್ ಬಂಗಲೆಗುಡ್ಡೆ ಕಾರ್ಯಕ್ರಮ ನಿರೂಪಿಸಿ, ಬಂದ ಅತಿಥಿಗಳನ್ನು ಸ್ವಾಗತಿಸಿದರು. ಸದಾಶಿವ ಪೂಜಾರಿ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here