ಪುದುವೆಟ್ಟು: ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುದುವೆಟ್ಟು: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಶ್ರೀ ಗುರು ನಾರಾಯಣ ಸೇವಾ ಸಂಘ ಪುದುವೆಟ್ಟು ಇಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಫೆ. 13ರಂದು ಸಂಜೆ ಗಂಟೆ 5.30 ಕ್ಕೆ ಆಯೋಜಿಸಲಾಗಿತ್ತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಪೂಜಾರಿ ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಶ್ರೀ ನಾರಾಯಣ ಗುರು ಬಿಲ್ಲವ ಸಂಘ ( S N D P ) ಮಿಯಾರು ಪುದುವೆಟ್ಟು ಇದರ ಮಾಜಿ ಅಧ್ಯಕ್ಷ ರಂಗನಾಥ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಉಮ್ಮಕ್ಕ, ಶ್ರೀ ಗುರು ನಾರಾಯಣ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಗುರುಪ್ರಸಾದ್, ಸದಸ್ಯರಾದ ವಿಶ್ವನಾಥ, ತಿಮ್ಮಪ್ಪ ಪೂಜಾರಿ, ರಮೇಶ್ ಪೂಜಾರಿ, ವಸಂತ ಪೂಜಾರಿ, ಹರಿಣಾಕ್ಷಿ ಹಾಗೂ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳು ಸೇರಿದ್ದರು.

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೋತ್ಸವ ಸಮಿತಿ ಧರ್ಮಸ್ಥಳ ವಲಯ ಸಂಚಾಲಕ ಲಿಂಗಪ್ಪ ಸಾಲಿಯನ್ ಪುದುವೆಟ್ಟು ಕಾರ್ಯಕ್ರಮವನ್ನು ಸಂಘಟಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಕುಮಾರಿ ಮಮತಾ ಕೆ. ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಹರೀಶ್ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here