ಶ್ರೀ ಗುರುದೇವಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನೇಹ ಕೂಟ ಕಾರ್ಯಕ್ರಮ

0

ಬೆಳ್ತಂಗಡಿ: ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ 2023-24 ನೇ ಸಾಲಿನಲ್ಲಿ ಬಿ.ಎ ಹಾಗೂ ಬಿ.ಕಾಂ ವಿಭಾಗದಲ್ಲಿ100% ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ”GET TOGETHER PARTY”(ಸ್ನೇಹ ಕೂಟ) ಕಾರ್ಯಕ್ರಮವನ್ನು ಫೆ. 16ರಂದು ಗುರುದೇವಾ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮಮದ ಅಧ್ಯಕ್ಷ ತೆಯನ್ನು ಗುರುದೇವಾ ಎಜುಕೇಶನ್ನಲ್ ಟ್ರಸ್ಟ್ ನ ಸದಸ್ಯರು ಹಾಗೂ ಬೆಳ್ತಂಗಡಿ ತಾಲೂಕಿನ ಮಾಜಿ ಶಾ‌ಸಕರು ಗುರುದೇವ ಕಾಲೇಜಿನ ಜನಕ ದಿ. ವಸಂತ ಬಂಗೇರರ ಸುಪುತ್ರಿ ಪ್ರೀತಿತಾ ಬಂಗೇರ ವಹಿಸಿಕೊಂಡು ಸಾಧನೆ ಮಾಡಿದ ವಿದ್ಯಾರ್ಥಿಗಳ ಕುರಿತು ಹಿತನುಡಿಗಳನ್ನಾಡಿದರು.

ವೇದಿಕೆಯಲ್ಲಿ ಉಪಸ್ಥಿತಿರಿದ್ದ ಶ್ರೀ ಗುರುದೇವಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಸವಿತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಗೌರವದ ಸ್ಮರಣಿಕೆ ನೀಡಲಾಯಿತು. ಕಾಲೇಜಿನ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿ ಗುರುದೇವಾ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಧರ್ಮವಿಜೇತ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಹಿತನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಬಿ. ಎ. ಶಮಿವುಲ್ಲಾ ಸ್ವಾಗತಿಸಿ, ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ಬಳಗ, ಕಛೇರಿ ಸಿಬ್ಬಂದಿಗಳು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಶಿವರಾಜ್ ಗಟ್ಟಿ ನಿರೂಪಣೆಯಲ್ಲಿ ಸಹಕರಿಸಿದರು. ರಾಜ್ಯ ಶಾಸ್ರ್ತ ಉಪನ್ಯಾಸಕಿ ಅಕ್ಷತಾ ವಂದಿಸಿದರು.

LEAVE A REPLY

Please enter your comment!
Please enter your name here