

ಬೆಳ್ತಂಗಡಿ: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಇದರ 12ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪುರುಷರ ವಿಭಾಗದ ಪ್ರೋ ಮಾದರಿಯ ಗ್ರಾಮ ಸೀಮಿತ ಮುಕ್ತ ಮ್ಯಾಟ್ ಕಬ್ಬಡ್ಡಿ ಪಂದ್ಯಾಟ ಹಾಗೂ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಫೆ. 23ರಂದು ಕುತ್ಲೂರು ಬಂತ್ರುಗುಡ್ಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕೊಕ್ರಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅರ್ಚಕ ರಮೇಶ್ ಭಟ್ ಉದ್ಘಾಟನೆ ಮಾಡಲಿದ್ದಾರೆ. ಪ್ರಭಾಕರ ಬುಣ್ಣು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕುತ್ಲೂರು ಪ್ರವೀಣ್ ಶಿಲ್ಪಲೋಕ ಕ್ರೀಡಾಂಗಣ ಉದ್ಘಾಟನೆ ಮಾಡಲಿದ್ದಾರೆ. ಪ್ರಸಾದ್ ಶೆಟ್ಟಿ ಹೊಸ್ಮಾರು ಮೆಡಿಕಲ್ ಕ್ಯಾಂಪ್ ಉದ್ಘಾಟನೆ ಮಾಡಲಿದ್ದಾರೆ.