ಉಜಿರೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ “ಹೊಂಬೆಳಕು 2025” ಎಂಬ ಸ್ಥಳೀಯಾಡಳಿತ ಸಂಭ್ರಮ ಕ್ರೀಡಾ ಕೂಟದಲ್ಲಿ ಉಜಿರೆ ಗ್ರಾಮ ಪಂಚಾಯತ್ ಗೌರವ ಸನ್ಮಾನ ಸ್ವೀಕರಿಸಿತು.
ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಕಾರದೊಂದಿಗೆ, ಗ್ರಾಮ ಸ್ವರಾಜ್ ಪ್ರತಿಷ್ಠಾನ ಮತ್ತು ಹೊಂಬೆಳಕು ಕ್ರೀಡಾ ಕೂಟ ಸಂಘಟನಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಫೆ. 22ರಂದು ಮಂಗಳೂರು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ನರೇಗಾ ಯೋಜನೆಯಲ್ಲಿ ಅತಿಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಸಾಧನೆಯನ್ನು ಗುರುತಿಸಿ ಹೊಂಬೆಳಕು ಸಂಘಟನಾ ಸಮಿತಿಯ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗ್ರಾಮ ಸ್ವರಾಜ್ ಪ್ರತಿಷ್ಠಾನಾ ಅಧ್ಯಕ್ಷ ಕೆ. ಸುಭಾಶ್ಚಂದ್ರ ಶೆಟ್ಟಿ ಇತರ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಸದಸ್ಯರುಗಳಾದ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ, ನಾಗೇಶ್ ರಾವ್, ಸಚಿನ್, ಜಗನ್ನಾಥ ರೈ, ಅನಿಲ್ ಪ್ರಕಾಶ್ ಡಿಸೋಜ, ದಿನೇಶ್, ಪ್ರೇಮಲತಾ, ಜೆನೆಟ್, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.