ಕುವೆಟ್ಟು: ಸ. ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್. ಡಿ. ಎಂ. ಸಿ ಸಮನ್ವಯ ವೇದಿಕೆ, ಶಾಲಾ ಎಸ್. ಡಿ. ಎಂ. ಸಿ ಹಾಗೂ ಎ. ಜೆ. ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಶಾಲಾ ವಿದ್ಯಾರ್ಥಿಗಳ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ ಜರುಗಿತು.
ಎ. ಜೆ. ಆಸ್ಪತ್ರೆಯ ವೈದ್ಯ ಡಾ. ಶಿಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು,. ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಸ್. ಡಿ. ಎಂ. ಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಉಮರ್ ಫಾರೂಕ್, ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷ ಹಾಜಿ ಲತಿಫ್, ಪಿಲಿಚಂಡಿಕಲ್ಲು ಹಿರಿಯ ಪ್ರಾಥಮಿಕ ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷ ಮುಸ್ತಫಾ, ಪಡಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಐಶ್ವರ್ಯ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಶಿವಾನಿ ಹಾಗೂ ಶಾಲಾ ಆರೋಗ್ಯ ಮಂತ್ರಿ ಮುಫೀದಾ ಬಾನು ಉಪಸ್ಥಿತರಿದ್ದರು.
102 ವಿದ್ಯಾರ್ಥಿಗಳು 5 ಮಂದಿ ಎಸ್. ಡಿ. ಎಂ. ಸಿ ಸದಸ್ಯರು ಚಿಕಿತ್ಸೆ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು. ದೈಹಿಕ ಶಿಕ್ಷಕಿ ಪೂರ್ಣಿಮಾ ವಂದಿಸಿದರು.