ಬೆಳ್ತಂಗಡಿ: ಫೆ. 28ರಂದು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಭೋದನಾ ಕಾರ್ಯಕ್ರಮ ನೆರವೇರಿತು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಬಿ. ಎ. ಶಮಿವುಲ್ಲಾ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಪ್ರಾಂಶುಪಾಲ ಡಾ. ಸವಿತಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಜನಾಧಿಕಾರಿ ಅಂಬಿಕಾ, ಉಪನ್ಯಾಸಕ ವೃಂದ, ಕಛೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾಯೋಜನೆಯ ಸಹಯೋಜನಾಧಿಕಾರಿ ಸತೀಶ್ ಸಾಲ್ಯಾನ್ ಕಾರ್ಯಕ್ರಮಕ್ಕೆ ವಂದಿಸಿದರು.