ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ: ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಮನವಿ

0

ಬೆಳ್ತಂಗಡಿ: ವಕೀಲ ಸಂಘದ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಫೆ. 28ರಂದು ನಡೆಯಿತು. ವಕೀಲರ ಸಂಘದಿಂದ ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಮತ್ತು ವಕೀಲ ಭವನಕ್ಕೆ ಲಿಫ್ಟ್ ವ್ಯವಸ್ಥೆ ಮಾಡಲು ಐವನ್ ಡಿಸೋಜರಿಗೆ ಮನವಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು. ಹಿರಿಯ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೊ ಸನ್ಮಾನ ಪತ್ರ ವಾಚಿಸಿದರು. ಹಿರಿಯ ವಕೀಲ ಬಿ. ಕೆ. ಧನಂಜಯ ರಾವ್ ಮನವಿ ವಾಚಿಸಿದರು. ವಕೀಲರ ಸಂಘದ ಕಾರ್ಯದರ್ಶಿ ನವೀನ್ ಬಿ. ಕೆ,., ಉಪಾಧ್ಯಕ್ಷ ಅಶೋಕ್ ಕರಿಯನೆಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ವಕೀಲ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳಾದ ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೆಡಿಪಿ ಸದಸ್ಯ ಸಂತೋಷ ಬಿ. ಎಲ್, ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲರು ಹಾಜರಿದ್ದರು. ವಕೀಲ ಸೇವಿಯರ್ ಪಾಲಿಯಾರ್ ಕಾರ್ಯಕ್ರಮ ನಿರೂಪಿಸಿ, ವಕೀಲರ ಸಂಘದ ಸದಸ್ಯೆ ಅಸ್ಮಾ ವಂದಿಸಿದರು.

LEAVE A REPLY

Please enter your comment!
Please enter your name here