ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆ. 28ರಂದು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ ರಜಪೂತ್ ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು. ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಜೋಸೆಫ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಉಷಾ, ಶೇಖರ್ ಗೌಡ, ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು.

6ನೇ ಮತ್ತು 7ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು. ಈ ಒಂದು ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮಾ ಕೆ. ಎಂ. ವಂದಿಸಿದರು.

LEAVE A REPLY

Please enter your comment!
Please enter your name here