ಮಚ್ಚಿನ ಗ್ರಾಮದ ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

1

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಚ್ಚಿನ ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಚ್ಚಿನ ಗ್ರಾಮದ ಕಲ್ಲಗುಡ್ಡೆಯಲ್ಲಿ ನಿರ್ಮಿಸಿದ ಮನೆಯನ್ನು ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಫಾ ಬಂಗೇರಕಟ್ಟೆ ಅವರ ಸಮ್ಮುಖದಲ್ಲಿ ಬಡ ಮಹಿಳೆಗೆ ಹಸ್ತಾಂತರ ಮಾಡಲಾಯಿತು.

ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಖತೀಬರಾದ ಸಲ್ಮಾನ್ ಅನ್ಸಾರಿ ಅವರು ದುವಾ ಆಶಿರ್ವಾದಗೈದರು. ಎಸ್‌.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಉದ್ಘಾಟನೆ ಮಾಡಿದರು.

ಎಸ್‌.ಡಿ.ಪಿ.ಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜಾತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು. ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಎಸ್‌.ಡಿ.ಪಿ.ಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಹನೀಫ್ ಟಿ.ಎಸ್., ಹಕೀಮ್, ಇಕ್ಬಾಲ್ ಬಳ್ಳಮಂಜ, ಎಸ್‌.ಡಿ.ಪಿ.ಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

1 COMMENT

LEAVE A REPLY

Please enter your comment!
Please enter your name here