ಬೆಳಾಲು: ಗ್ರಾಮ ಪಂಚಾಯತಿನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ.6ರಂದು ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯವಾಗಿ ವಿದ್ಯುತ್ ಸಮಸ್ಯೆ ಗ್ರಾಮದಲ್ಲಿ ಇದ್ದು, ಅಧಿಕಾರಿಗಳು ಎಲ್ಲಾ ಅಧಿಕಾರಿಗಳು ಬಾರದೆ ಇದ್ದುದರಿಂದ ಅವರು ಬಂದ ನಂತರವೇ ಗ್ರಾಮ ಸಭೆ ಪ್ರಾರಂಭ ಮಾಡಿ ಎಂದು ಗ್ರಾಮಸ್ಥರು ಒತ್ತಾಯಿಸಿದರು. ಅದರಂತೆ ಕೆಲವು ಅಧಿಕಾರಿಗಳು ಬಂದ ನಂತರ ಒಂದು ಗಂಟೆ ತಡವಾಗಿ ಗ್ರಾಮ ಸಭೆ ಪ್ರಾರಂಭಗೊಂಡಿತು. ಜಿ. ಪಂ. ಕುಡಿಯುವ ನೀರು ಇಲಾಖೆಯ ಇಂಜಿನಿಯರ್ ಜಗದೀಶ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷೆ ಗೀತಾ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಸ್ವಾಗತಿಸಿ, ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ಪೂರ್ಣಿಮಾ ಲೆಕ್ಕಪತ್ರ ವಾಚಿಸಿದರು. ಸಿಬ್ಬಂದಿ ಶಶಿಧರ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳ ವಿವರ ಓದಿದರು.
ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ಸಿಬ್ಬಂದಿಗಳು ಸಹಕರಿಸಿದರು.
ಈ ಸಂದರ್ಭದಲ್ಲಿ ಘನ ತ್ಯಾಜ್ಯ ಸಂಗ್ರಹಕ್ಕೆ ಸಾಂಕೇತಿಕವಾಗಿ ಕಸದ ಬುಟ್ಟಿ ವಿತರಣೆ ಮಾಡಲಾಯಿತು.