ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು

0

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಫೆ.8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹೇಳಿಕೆಗಳನ್ನು ನೀಡಿದ್ದಾರೆಂದು ದೂರು ದಾಖಲಾಗಿದ್ದು, ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಒಬ್ಬ ಅಧರ್ಮಿಯಿಂದ ಧರ್ಮ ನಾಶವಾಗುತ್ತಿದೆ, ಇಂದು ಧಾರ್ಮಿಕ ಸ್ಥಳಗಳಿಗೆ ಮತ್ತು ಹಿಂದೂ ಸಮಾಜಕ್ಕೆ ಅಧರ್ಮಿಗಳ ಪ್ರಭಾವ ಹೆಚ್ಚಾಗಿದೆ. ನಾವು ನಮ್ಮ ಸಂಪ್ರದಾಯವನ್ನು ಉಳಿಸಿಕೊಳ್ಳಬೇಕಾದ ಸಮಯ ಬಂದಿದೆ. ಅಧರ್ಮಿಯರ ದುಡ್ಡು ತಂದು ಧರ್ಮಸ್ಥಳ ಮಾತ್ರವಲ್ಲ, ಉಡುಪಿ ದೇವಾಲಯಗಳಲ್ಲಿ ಇರಿಸಿಕೊಳ್ತಿದ್ದಾರೆ ಎಂಬ ಹೇಳಿಕೆಯ ಆಧಾರದ ಮೇಲೆ ಕೇಸ್ ದಾಖಲಾಗಿದೆ.

ಈ ಹಿಂದೆ ಉಚ್ಚ ನ್ಯಾಯಾಲಯ ತನ್ನ ಅದೇಶದಲ್ಲಿ, ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿತ್ತು.

ಇದರ ಹೊರತಾಗಿಯೂ ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದ ಬಗ್ಗೆ ಹೇಳಿಕೆಗಳನ್ನು ನೀಡಿದ್ದು, ಶ್ರೀ ಕ್ಷೇತ್ರದ ಭಕ್ತರು ಮನನೊಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here