
ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ (ರಿ)
ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾ. 8ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ವಹಿಸಿಕೊಂಡು ಮಹಿಳಾ ದಿನಾಚರಣೆಯ ಕುರಿತು ಹಿತನುಡಿಗಳನ್ನಾಡಿದರು.
ವೇದಿಕೆಯಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿಯಾದ ಬಬಿತ ರೈ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಉಪಸ್ಥಿತಿಯನ್ನು ವಹಿಸಿಕೊಂಡು ಮಹಿಳೆಯರಿಗೂ ಪುರುಷರ ಹಾಗೆ ಸಾಮಾನ ಸ್ಥಾನ ಮಾನ ಸಿಗುವಂತಾಗಬೇಕೆಂದು ಹಿತನುಡಿಗಳನ್ನಾಡಿದರು.
ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ, ಕಛೇರಿ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿ ಪ್ರತೀಕ್ಷ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಿ ಶ್ರೀ ಸ್ವಾಗತಿಸಿ, ರಶ್ಮಿತಾ ಧನ್ಯವಾದ ಸಮರ್ಪಿಸಿದರು. ಸಂಜೆ ಲಘು ಉಪಹಾರದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.