ಅರಸಿನಮಕ್ಕಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

0

ಅರಸಿನಮಕ್ಕಿ: ಮಾ.9: ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಮತ್ತು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 31ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಅರಸಿನಮಕ್ಕಿಯ ಹತ್ಯಡ್ಕ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ಮಾ. 9ರಂದು ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಗಾಯತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ದೀಪ ಜ್ಯೋತಿ ಹೇಗೆ ಬೆಳಗುತ್ತ ಹಾಗೆ ನೀವು ಟೈಲರಿಂಗ್ ವಿದ್ಯೆಯನ್ನು ಕಲಿತು ಒಳ್ಳೆಯ ರೀತಿಯಲ್ಲಿ ಸಮಾಜದಲ್ಲಿ ಬೆಳಗಬೇಕು ಎಂದು ಶುಭಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶಾಂತ ಪಿ ಶೆಟ್ಟಿ, ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ನೀತಾ ರಾಜೇಶ್ ಆಚಾರ್ಯ, ಅರಸಿನಮಕ್ಕಿ ಹಿರಿಯ ಟೈಲರಿಂಗ್ ತರಬೇತುದಾರರಾದ ಶಕುಂತಳಾ ಎಂ ಆಚಾರ್ ಮತ್ತು ಟೈಲರಿಂಗ್ ತರಬೇತುದಾರರಾದ ರೇಷ್ಮಾ ಜಯಪ್ರಸಾದ್ ಶೆಟ್ಟಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 31 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಧನ್ಯ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಭಾರತಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here