ಉಜಿರೆ: ಮಾ12: “ಸ್ತ್ರೀಯರು ತಮ್ಮ ಪ್ರೀತಿಪಾತ್ರರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಉತ್ತಮ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಪ್ರಿಯಾಂಕಾ ಜಯದೇವ್ ಹೇಳಿದರು.
ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.
ಇನ್ನೊರ್ವ ಅತಿಥಿಯಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಸಂಯೋಜಕ ಶಿಕ್ಷಕಿ ಸ್ಮೃತಿ ಜೈನ್ ಮಹಿಳೆಯರ ಸಾಮರ್ಥ್ಯದ ಬಗ್ಗೆ ಮಾತನಾಡಿದರು.
ಶಿಕ್ಷಕಿ ಚೇತನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಶೋಭಿತ ವಂದಿಸಿದರು.