ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ (ರಿ.) ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಮಾ. 09ರಂದು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಸಂಘದ ಅಧ್ಯಕ್ಷರು ಮತ್ತು ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.
ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏ. 20ರಂದು ಆದಿತ್ಯವಾರ ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯರ್ತಡ್ಕ, ಕಳೆಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.
ವಿಶೇಷ ಆಕರ್ಷಣೆ: ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ(ರಿ.) ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ.