

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜುನಲ್ಲಿ ಆಯೋಜಿಸಿದ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಾದ ಫಾತಿಮಾತ್ ರಾಫಿಯ ಮತ್ತು ಯಶಸ್ ಭಾಗವಹಿಸಿ, ದ್ವಿತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.