ಎಲ್‌.ಸಿ.ಆರ್ ಇಂಡಿಯನ್ ಪ. ಪೂ. ಕಾಲೇಜು ಕಕ್ಯಪದವು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದಾಖಲು

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್. ಸಿ. ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ 2024 -25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿಭಾಗದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗವು ಒಟ್ಟಾರೆಯಾಗಿ 100% ಶೇಕಡಾ ಫಲಿತಾಂಶ ದಾಖಲಿಸಿದೆ.

ಪರೀಕ್ಷೆಯಲ್ಲಿ ಹಾಜರಾದ 31 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ತೇರ್ಗಡೆಗೊಂಡಿರುತ್ತಾರೆ. ವಿದ್ಯಾರ್ಥಿನಿ ವರ್ಷ 576(96%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಅನುಷಾ 572(95%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ಅಫ್ರಾ 571(95.16%) ಅಂಕಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ , ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಎಲ್ಲರಿಗೂ ಅಭಿನಂದನೆಗಳು.

LEAVE A REPLY

Please enter your comment!
Please enter your name here