ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್‌ರ ಜನ್ಮ ದಿನಾಚರಣೆ – ಮಹಾನ್ ವ್ಯಕ್ತಿಗಳ ಸಾಧನೆಯನ್ನು ನೆನಪಿಸಿಕೊಳ್ಳಲು ಜನ್ಮದಿನಾಚರಣೆ: ತಾರಕೇಸರಿ

0

ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮ ದಿನಾಚರಣೆಯನ್ನು ಎ.೫ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಚರಿಸಲಾಯಿತು.

ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಡಾ. ಬಾಬು ಜಗಜೀವನರಾಮ್‌ರವರ ಜೀವನಚರಿತ್ರೆ, ಚಿಂತನೆ, ಮಾರ್ಗಗಳನ್ನು ಅಳವಡಿಸಿಕೊಂಡರೆ ಮಾತ್ರ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಘೋಷವಾಕ್ಯ ಸಾರ್ಥಕವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ದಂಡಾಧಿಕಾರಿ ಪೃಥ್ವಿ ಸಾನಿಕಂ ಮಾತನಾಡಿ, ಸಮಾನತೆಯನ್ನು ಪ್ರತಿಪಾದಿಸಲು ಶ್ರಮಿಸಿದ ಡಾ.ಬಾಬು ಜಗಜೀವನರಾಮ್‌ರವರ ಜೀವನ ಚರಿತ್ರೆಯನ್ನು ಸ್ಮರಿಸಿಕೊಂಡರು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಧಾನ ಭಾಷಣ ನೆರವೇರಿಸಿ, ಮಹಾನ್ ವ್ಯಕ್ತಿಗಳ ಸಾಧನೆ, ಸೇವೆ, ಕೊಡುಗೆ ನೆನಪಿಸಲು ಹಾಗೂ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದಕ್ಕಾಗಿ ಜನ್ಮ ದಿನಾಚರಣೆಯನ್ನು ಆಚರಿಸುವುದು ರೂಢಿಯಲ್ಲಿದೆ. ಬಿಹಾರದ ಸಣ್ಣ ಹಳ್ಳಿಯಲ್ಲಿ ಜನಿಸಿದ ಡಾ. ಬಾಬು ಜಗಜೀವನರಾಮ್ ಸಣ್ಣ ವಯಸ್ಸಿನಲ್ಲಿಯೇ ಉನ್ನತ ಮೌಲ್ಯಗಳೊಂದಿಗೆ ಬೆಳೆದು ರಾಷ್ಟ್ರಮಟ್ಟದಲ್ಲಿ ಸಾಮಾಜಿಕ ಹಾಗೂ ಸಮಾನತೆಯ ಬುನಾದಿಯನ್ನು ಹಾಕಿಕೊಟ್ಟ ಬಗ್ಗೆ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್., ಪಟ್ಟಣ ಪಂಚಾಯತ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೆ., ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಯರಾಜ್ ಜೈನ್, ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಶ್ರೀಧರ ಶೆಟ್ಟಿ, ಧೀರಜ್, ಬಸವರಾಜ್, ಆಶಾ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಹಾಗೂ ವಿದ್ಯಾರ್ಥಿಗಳು, ಪ.ಜಾತಿ ಹಾಗೂ ಪ.ಪಂಗಡದ ಮುಖಂಡರು, ವಸತಿ ನಿಲಯ ಮತ್ತು ವಸತಿ ಶಾಲೆ ಅಧ್ಯಾಪಕರು, ತಾಲೂಕಿನ ವಿವಿದ ಇಲಾಖೆಯ ಮುಖ್ಯಸ್ಥರು, ವಿವಿಧ ಸಂಘಟನೆಯ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

ಮುಂಡಾಜೆಯ ಪ. ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ ಸ್ವಾಗತಿಸಿದರು. ಅಳದಂಗಡಿಯ ಪ. ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಹೇಮಲತಾ ಎಂ. ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಪಂಚಾಯತ್‌ನ ಸಿಬ್ಬಂದಿ ಜಯಾನಂದ ವಂದಿಸಿದರು.

LEAVE A REPLY

Please enter your comment!
Please enter your name here