ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸೇಕ್ರೆಡ್‌ ಹಾರ್ಟ್ ಕಾಲೇಜು ಮಡಂತ್ಯಾರಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

0

ಮಡಂತ್ಯಾರು: ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸೇಕ್ರೆಡ್‌ ಹಾರ್ಟ್ ಕಾಲೇಜು ಮಡಂತ್ಯಾರು ಇದರ ವತಿಯಿಂದ ಏ. 14ರಂದು ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು.

ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ರವರು ಅಂಬೇಡ್ಕರ್ ಅವರ ಜೀವನದ ಮೌಲ್ಯಗಳು, ಸಂವಿಧಾನ ರಚಿಸುವಲ್ಲಿ ಅವರ ಪಾತ್ರ ಶೋಷಿತ ಜನಾಂಗಕ್ಕೆ ನೀಡಿದ ಕೊಡುಗೆಯಾಗಿದೆ ಎಂದು ನುಡಿದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರಶಾಂತ್ ಎಂ. ಸ್ವಯಂ ಸೇವಕರಿಗೆ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರಶಾಂತ್ ಎಂ., ಜೀವಾ ವಿ. ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here