
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಭಾರತ ಸರ್ಕಾರ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಏ. 22ರಂದು ಭೇಟಿ ಮಾಡಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವರದಿಯನ್ನು ಸಲ್ಲಿಸಿ ಮನವಿಯನ್ನು ಮಾಡಲಾಯಿತು. ಕಟ್ಟಡ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.
ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಸ್ವರ್ಣ ಗೌರಿ, ಕಾರ್ಯದರ್ಶಿ ಬಾಲಕೃಷ್ಣ, ಸೇವಾಭಾರತಿಯ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ., ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ. ಉಪಸ್ಥಿತರಿದ್ದರು.