
ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಕಳೆದ 4 ದಿನದಿಂದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದ ಕಾರಣ, ಗ್ರಾ.ಪಂ.ಗಳಲ್ಲಿ ಆನ್‌ಲೈನ್ ಕೆಲಸ ಕಾರ್ಯಗಳನ್ನು ಮಾಡಲು ಸಮಸ್ಯೆಯಾಗಿದೆ. ಇದರಿಂದ ಬಿಎಸ್‌ಎನ್‌ಎಲ್ ಕಂಪೆನಿ ವಿರುದ್ಧ ಆಕ್ರೋಶಗೊಂಡ ಗ್ರಾಹಕರು ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಿ, ಇಲ್ಲದೆ ಹೋದರೆ ಗುಜರಿಗೆ ಮಾರಾಟ ಮಾಡಲಿ ಎಂದು ಕಿಡಿಕಾರಿದ್ದಾರೆ.