ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ – ಸಮಾವೇಶ: ದಲಿತ ಸಾಂಸ್ಕೃತಿಕ ವೈವಿಧ್ಯ: ವಿಶ್ವ ಮೈತ್ರಿ ಬೌದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿಯವರಿಂದ ಆಶೀರ್ವಚನ

0

ಬೆಳ್ತಂಗಡಿ: ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶವು ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಎ.28ರಂದು ಜರಗಿತು. ಮೈಸೂರಿನ ವಿಶ್ವ ಮೈತ್ರಿ ಬೌದ್ಧ ವಿಹಾರದ ಡಾ.ಕಲ್ಯಾಣಸಿರಿ ಭಂತೇಜಿಯವರು ದಿವ್ಯ ಸಾನಿಧ್ಯ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದಲಿತ ಚಳುವಳಿ 50ರ ಸಂಭ್ರಮಾಚರಣಾ ಸಮಿತಿಯ ಅಧ್ಯಕ್ಷ ಬಿ.ಕೆ. ವಸಂತ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಂಸ್ಕೃತಿಕ ಅಂಗವಾಗಿ ಪುದುವೆಟ್ಟು ಹಾಗೂ ಧರ್ಮಸ್ಥಳ ತಂಡದಿಂದ ಮೊಗೇರ ಸಮುದಾಯದ ದುಡಿಕುಣಿತವನ್ನು ಪ್ರದರ್ಶಿಸಲಾಯಿತು. ಸುದರ್ಶನ್ ಅಂಡಿಂಜೆಯವರು ಮಹಾನಾಯಕ ಎಂಬ ಕ್ರಾಂತಿ ಗೀತೆಯನ್ನು ಹಾಡಿದರು. ಮೆರವಣಿಗೆ ಎಂಬ ಸ್ಮರಣ ಕೃತಿಯನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ನಿವೃತ್ತ ಡಿ.ವೈ.ಎಸ್.ಪಿ. ಸುಹೈಲ್ ಅಹಮದ್, ಯುವ ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ ಉರುವಾಲು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎನಿಂಜೆ, ಬೆಳ್ತಂಗಡಿಯ ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಎ., ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ದಲಿತ ಸಮಿತಿಯ ಸಂಚಾಲಕ ಚೆನ್ನಕೇಶವ ಬೆಳ್ತಂಗಡಿ, ಆಲ್ ಇಂಡಿಯಾ ಕಥೋಲಿಕ್ ಯೂನಿಯನ್ ಕರ್ನಾಟಕದ ನಿಕಟಪೂರ್ವ ಅಧ್ಯಕ್ಷ ಸೇವಿಯಾರ್ ಪಾಲೇಲಿ, ಎಸ್. ಬೇಬಿ ಸುವರ್ಣ, ಪದ್ಮನಾಭ ಗರ್ಡಾಡಿ, ಎನ್.ಕೆ.ಸುಂದರ್ ಲ್ಯಾಲ, ಅಣ್ಣು ಸಾಧನಾ ಪದ್ಮುಂಜ, ಪಿ.ಕೆ.ರಾಜು ಪಡಂಗಡಿ, ಸಂಜೀವ ಆರ್. ಬೆಳ್ತಂಗಡಿ, ಕಿರಣ್ ಕುಮಾರ್ ಪುದುವೆಟ್ಟು, ಶ್ರೀಧರ್ ಎಸ್. ಕಳೆಂಜ, ವೆಂಕಣ್ಣ ಕೊಯ್ಯೂರು, ಧೀಮಾನ್ ಕೆ. ನೇಮಿರಾಜ್ ಕಿಲ್ಲೂರು, ರಮೇಶ್ ಆರ್. ಬೆಳ್ತಂಗಡಿ, ರಮೇಶ್ ಉಮಿಯ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ದ.ಸಂ.ಸ ಮಂಗಳೂರಿನ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಸುಣ್ಣಾಜೆ, ಮ.ಬಂ.ವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕ ಪ್ರೇಮಿ ಫೆರ್ನಾಂಡಿಸ್, ದ.ಕ. ಜಿಲ್ಲಾ ಕೆ.ಡಿ.ಪಿ. ಸದಸ್ಯ ಸಂತೋಷ್ ಕುಮಾರ್, ಮಂಗಳೂರಿನ ಸಮಾನ ಮನಸ್ಕ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ರಾಜಾ ಚಂಡ್ತಿಮಾರ್, ಬೆಳ್ತಂಗಡಿ ಬಿ.ಜೆ.ಪಿ. ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿ.ಎಸ್.ಪಿ ಬೆಳ್ತಂಗಡಿಯ ಅಧ್ಯಕ್ಷ ಪಿ.ಎಸ್. ಶ್ರೀನಿವಾಸ್, ಬೆಳ್ತಂಗಡಿ ಎಸ್. ಡಿ. ಪಿ. ಐ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಜಯಕೀರ್ತಿ ಜೈನ್ ಧರ್ಮಸ್ಥಳ, ಮಂಗಳೂರು ವಿಶ್ವವಿದ್ಯಾನಿಲಯದ ಉಪನ್ಯಾಸಕ ರಘು ಧರ್ಮಸೇನ್, ಶಿಕ್ಷಣ ಇಲಾಖೆಯ ನಿವೃತ್ತ ಸಿಬ್ಬಂದಿ ಶೀನ ಬಂಗೇರ ಲಾಯಿಲ, ಸಾಮಾಜಿಕ ಹೋರಾಟಗಾರ ಶೇಖರ್ ಎಲ್., ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ನಜೀರ್, ಬೆಳ್ತಂಗಡಿ ಎಸ್.ಸಿ ಮೋರ್ಚಾ ಬಿಜೆಪಿ ಮಂಡಲ ಅಧ್ಯಕ್ಷ ಈಶ್ವರ ಬೈರ, ದಲಿತ ಚಳುವಳಿಯ ಬೆಂಬಲಿಗರು, ವಿವಿಧ ಸಂಘ ಸಂಸ್ಥೆಯ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here