
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ಮೇ. 2ರಂದು ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್ ಸೈಟ್ ನಲ್ಲಿ ಮಧ್ಯಾಹ್ನ 12.30ಗೆ ನೋಡಬಹುದು.
ಮಾ. 21ರಿಂದ ಎ. 4ರವರೆಗೆ ಪರೀಕ್ಷೆ ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ. ಈ ಬಾರಿ 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.96 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.