
ಬೆಳ್ತಂಗಡಿ: ಬೇರೆ ಬೇರೆ ಕ್ಷೇತ್ರಗಳಲ್ಲಿ ಕಲ್ಯಾಣೋತ್ಸವ ನಡೆಯುವ ಹಾಗೆ ನಮ್ಮ ಕ್ಷೇತ್ರದಲ್ಲಿಯೂ ಶ್ರೀನಿವಾಸ ಕಲ್ಯಾಣೋತ್ಸವ ಮಾಡಬೇಕು ಎಂದು ಜನರು ಸಲಹೆ ನೀಡಿದ ಹಿನ್ನಲೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡಬೇಕು ಎಂದು ತೀರ್ಮಾನಿಸಲಾಯಿತು.
ಈ ಕಾರ್ಯಕ್ರಮದ ಎಲ್ಲಾ ಕೆಲಸಗಳು ಭರದಿಂದ ಸಾಗುತ್ತಿದೆ. ತಾಲೂಕಿನ 81 ಗ್ರಾಮಗಳಿಗೂ ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ನೀಡಲಾಗಿದೆ.
ಮೇ. 4ರಂದು 5 ಗಂಟೆಗೆ ಮಂಜೊಟ್ಟಿಯಿಂದ ಕಲ್ಯಾಣೋತ್ಸವ ಕಾರ್ಯಕ್ರಮದ ದಿಬ್ಬಣ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಸಮಾಜದ ಬಂಧುಗಳು ಭಾಗವಹಿಸಬೇಕು. ದೇವರ ಆಶೀರ್ವಾದವನ್ನು ಎಲ್ಲರೂ ಪಡೆದುಕೊಳ್ಳಬೇಕು.ಈ ಕಾರ್ಯಕ್ರಮ ಎಲ್ಲರಿಗೂ ಶಕ್ತಿ ನೀಡಬೇಕು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಹರೀಶ್ ಪೂಂಜ ಏ.30 ರಂದು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಕಾರ್ಯಕ್ರಮದ ವಿವರ: ನಡ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ತಿರುಪತಿಯ ಅರ್ಚಕ ಡಾ.ಎನ್. ತನುಜಾ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದ ಕುಮಾರ್ ನೇತೃತ್ವದಲ್ಲಿ ನಡೆಯಲಿದೆ.
ಮೇ.3ರಂದು ಸಂಜೆ 4-30ಕ್ಕೆ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಮೆರವಣೆಗೆ ಉದ್ಘಾಟನೆ ನಂತರ ತಾಲೂಕಿನ ವಿವಿಧ ಭಜನಾ ತಂಡಗಳ ಮೂಲಕ ಭಜನೆ ಮೆರವಣಿಗೆ
ಸಂಜೆ 7ಕ್ಕೆ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.
ಮೇ.6ರಂದು ಬೆಳಿಗ್ಗೆ 5ಕ್ಕೆ ಸುಪ್ರಭಾತಂ, 6ರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆದು ಉಪಾಹಾರ ನಂತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಸಂಜೆ ಗಂಟೆ 3-30ಕ್ಕೆ ವೈಭವೋಪೇತ ಶೋಭಾಯಾತ್ರೆ ನಡ ಪೇಟೆಯಿಂದ ನಡೆಯಲಿದೆ. ಸಂಜೆ 6ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ರಿಂದ ಕಲ್ಯಾಣೋತ್ಸವ, ಅನ್ನಸಂತರ್ಪಣೆ ನಡೆದು ನಂತರ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 10ರಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹರೀಶ್ ಪೂಂಜ ಹೇಳಿದರು.
ಕುತ್ಯಾರು ದೇವಸ್ಥಾನದಿಂದ ಚಾಲನೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದ ಕಾರ್ಯಕ್ರಮ ಇನ್ನಷ್ಟು ಉತ್ತೇಜನ ಕೊಟ್ಟಿದೆ. ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಮೆರವಣೆಗೆ ಹೊರಟು ನಂತರ ಭಜನಾ ತಂಡಗಳಿಂದ ಮೆರವಣೆಗೆ ನಡೆದು ನಡ ಗ್ರಾಮ ನರಸಿಂಹ ಪ್ರದೇಶಕ್ಕೆ ಬರಲಿದೆ. ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.
ಈ ಭಾಗದ ಜನರಿಗೆ ಶ್ರೀನಿವಾಸ ಕಲ್ಯಾಣೋತ್ಸವ ವಿಶೇಷವಾದ ಕಾರ್ಯಕ್ರಮ. ಈ ಭಾಗದಲ್ಲಿ ಮೊದಲ ಬಾರಿಗೆ ಕಾರ್ಯಕ್ರಮ ನಡೆಯುತ್ತಿದೆ. ಮೇ.6ರಂದು ಬೆಳಿಗ್ಗೆ 5ಕ್ಕೆ ಸುಪ್ರಭಾತಂ, 6 ರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆದು ಉಪಾಹಾರ ನಂತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಸಂಜೆ ಗಂಟೆ 3-30 ಕ್ಕೆ ವೈಭವೋಪೇತ ಶೋಭಾಯಾತ್ರೆ ನಡ ಪೇಟೆಯಿಂದ ನಡೆಯಲಿದೆ. ಸಂಜೆ 6 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ರಿಂದ ಕಲ್ಯಾಣೋತ್ಸವ, ಅನ್ನಸಂತರ್ಪಣೆ ನಡೆದು ನಂತರ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 10 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ನೃತ್ಯ ಭಜನೆಯ ಮೂಲಕ ಗ್ರಾಮದ ಮನೆ ಮನೆಗೆ ತೆರಳಿ ಆಮಂತ್ರಣ ಪತ್ರವನ್ನ ನೀಡಲಾಗಿದೆ. ತಿರುಪತಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮಾಡಬೇಕಾದರೆ ತುಂಬಾ ಖರ್ಚುಗಳಾಗುತ್ತದೆ. ಆದರೆ ಇಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಪೂಜೆಯನ್ನು ಮಾಡಲು ನಿರ್ಧರಿಸಿದ್ದೇವೆ.
ಅಧ್ಯಕ್ಷ ಡಾ. ಪ್ರದೀಪ್ ಕುಮಾರ್ ನಾವೂರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಕರುಣಾಕರ ಗೌಡ, ಕೋಶಾಧಿಕಾರಿ ಪುರುಷೋತ್ತಮ ಶೆಣೈ, ಚೆನ್ನಕೇಶವ ಗೌಡ ಭೋಜಾರ, ಉಪಾಧ್ಯಕ್ಷ ಅಜಿತ್ ಕುಮಾರ್ ಅರಿಗ ಉಪಸ್ಥಿತರಿದ್ದರು. ಪ್ರಧಾನ ಸಂಚಾಲಕ ನವೀನ್ ನೆರಿಯ ಸ್ವಾಗತಿಸಿ, ವಂದಿಸಿದರು.