ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಗೌರವಾಧ್ಯಕ್ಷ ಹೆಚ್. ಪದ್ಮಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಕೋಶಾಧಿಕಾರಿ ಯುವರಾಜ್ ಅನಾರು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ದೇವಸ, ನಿರ್ದೇಶಕ ದಿನೇಶ್ ಗೌಡ ದೇಂತ್ಯಾರುಬೊಟ್ಟು, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯ ಲಕ್ಷ್ಮೀನಾರಾಯಣ ಕೆ. ವಾಣಿ ಆಂಗ್ಲ ಮಾಧ್ಯಮ ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಉಪಸ್ಥಿತರಿದ್ದು, ಹೂಗುಚ್ಚ ನೀಡಿ ಶುಭ ಹಾರೈಸಿದರು.