ಬೆಳ್ತಂಗಡಿ: ತಾಲ್ಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ. 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ. ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ನ್ಯೂಸ್ ಗೆ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಬೆಳ್ತಂಗಡಿ ತಾಲ್ಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ. 25ರಂದು ಆಯೋಜಿಸಿರುವ: ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ...