ಉಜಿರೆ: ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಮೇ.5ರಿಂದ 11ರವರೆಗೆ ಬೆಳ್ತಂಗಡಿ ತಾಲೂಕಿನ ಪಜಿರಡ್ಕದ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಕಲ್ಮಂಜ ಗ್ರಾ.ಪಂ. ಅಧ್ಯಕ್ಷೆ ವಿಮಲಾ ಗೌಡ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಶಿಬಿರದಲ್ಲಿ ಪ್ರತಿ ದಿನ ಶ್ರಮದಾನದ ಜೊತೆಗೆ ಮಾಹಿತಿ ಸಭೆ, ಸಾಮಾಜಿಕ ಜಾಗೃತಿ, ಯೋಗ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲ್ಮಂಜ ಗ್ರಾ. ಪಂ. ಮಾಜಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಸ್ವಯಂ ಸೇವಕರನ್ನು ಅಭಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ರವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾದ ಮಹೇಶ್ ಪಾಟೀಲ್ ಮತ್ತು ಯಶವಂತ್ ಇವರ ನೇತೃತ್ವದಲ್ಲಿ ಶಿಬಿರವನ್ನು ನಡೆಸಲಾಯಿತು.