ಬಂಗಾಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮೇ. 3ರಿಂದ 17ರವರೆಗೆ ನಡೆಯಿತು.
ಶಿಬಿರದ ಸಮಾರೋಪ ಸಮಾರಂಭವನ್ನು ಪಂಚಾಯತ್ ಅಧ್ಯಕ್ಷೆ ಆಶಾಲತಾ ಉದ್ಘಾಟಿಸಿದರು. ವೇದಿಕೆಯಲ್ಲಿ ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಆಶಾ ಕಾರ್ಯಕರ್ತೆ ಚಂದ್ರಕಾಂತಿ ಉಪಸ್ಥಿತರಿದ್ದರು. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ಅನಿಸಿಕೆ ಹೇಳಿದರು. ಶ್ರೇಣಿ ಸ್ವಾಗತಿಸಿ, ಗ್ರಂಥಾಲಯ ಮೇಲ್ವಿಚಾರಕಿ ರಾಜೀವಿ ವಂದಿಸಿದರು.