ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್. ಹೆಗ್ಡೆ ಹೆಚ್ಚುವರಿ 1 ಅಂಕ ಮತ್ತು ದಿಯಾ ಹೆಚ್ಚುವರಿ 9 ಅಂಕ ಪಡೆದು 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾರೆ.
ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯು ಸತತ 10 ವರ್ಷಗಳಿಂದ ಶೇ.100 ಫಲಿತಾಂಶ ಗಳಿಸಿ ಅಮೋಘ ಸಾಧನೆಯನ್ನು ಮಾಡಿದೆ.