ಶಿಶಿಲ: ಸರಕಾರದ ಆದೇಶದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿಯಲ್ಲಿ ಜೂ.3ರಂದು ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ. ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅಥಿತಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅತಿಥಿಗಳಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ, ಆಶ್ರಮ ಶಾಲಾ ಶಿಕ್ಷಕಿ ಹೇಮಲತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇವತಿ, ಆಶಾ ಕಾರ್ಯಕರ್ತೆ ರೂಪ ಉಪಸ್ಥಿತರಿದ್ದರು.
ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಯಶೋದಾ ಸ್ವಾಗತಿಸಿ, ಧನ್ಯವಾದವಿತ್ತರು.