ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 2ರಂದು ಶಾಲಾ ಪ್ರಾರಂಭೋತ್ಸವವನ್ನು ಹೊಸ ಹುರುಪು ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ದೀಪವು ಪ್ರಕಾಶಮಾನವಾಗಿ ಪ್ರಜ್ವಲಿಸುವಂತೆ ಮಕ್ಕಳ ಭವಿಷ್ಯವು ಬೆಳಗಲಿ ಎನ್ನುವ ಆಶಯದಿಂದ ಹೊಸ ಶೈಕ್ಷಣಿಕ ವರ್ಷವನ್ನು ದೀಪೋಜ್ವಲನದ ಮೂಲಕ ಪ್ರಾರಂಭಿಸಲಾಯಿತು.

ಶಿಕ್ಷಕ ವೃಂದದವರು ದೇವರ ಅನುಗ್ರಹಕ್ಕಾಗಿ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಶಾಲಾ ಸಂಚಾಲಕ ಫಾ. ವೊಲ್ಟರ್ ಡಿಮೆಲ್ಲೋ ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕಿಯರನ್ನು ಸ್ವಾಗತಿಸಿ, ವಿದ್ಯಾರ್ಥಿಗಳು ಪಾಠ ಮತ್ತು ಪಾಠೇತರ ವಿಷಯಗಳಲ್ಲಿ ಭಾಗವಹಿಸಿ ಅವಕಾಶಗಳನ್ನು ಸದುಪಯೋಗಪಡಿಸಬೇಕೆಂದು ನುಡಿದು ಆಶೀರ್ವದಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಫಾ. ಕ್ಲಿಫರ್ಡ್ ಪಿಂಟೋ ಹೊಸ ಶಿಕ್ಷಕಿಯರನ್ನು ಪರಿಚಯಿಸಿ, ಶಾಲಾ ನಿಯಮಾವಳಿಗಳನ್ನು ತಿಳಿಸಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಶಿಕ್ಷಕ ವೃಂದದವರು ಶುಭಾಶಯ ಗೀತೆ ಮತ್ತು ನೃತ್ಯದ ಮೂಲಕ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಮೇಶ್ ಉಪಸ್ಥಿತರಿದ್ದರು. ಸಹಶಿಕ್ಷಕಿ ಬ್ಲೆಂಡಿನ್ ರೊಡ್ರಿಗಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here