ಬೆಳ್ತಂಗಡಿ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾದ್ಯಕ್ಷ ಲಾರೆನ್ಸ್ ಮುಕ್ಕುಯಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಿಕ್ಷಣ ಸಮಾಜದ ಬೆಳಕು, ಬೆಳಕು ಇಲ್ಲದೆ ಬೆಳವಣಿಗೆ ಇಲ್ಲ ಎಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶುಭ ಸಂದೇಶವನ್ನು ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಫಾ. ಸೆಬಾಸ್ಟಿಯನ್, ಶಾಲಾ ಪ್ರಾಂಶುಪಾಲ ಫಾ.ಮ್ಯಾಥ್ಯೂ, ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಸಿ.ಎಲಿಝಬೆತ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಮುನ್ನುಡಿ ಇಟ್ಟರು. ಶಾಲೆಗೆ ದಾಖಲಾದ ಹೊಸ ವಿದ್ಯಾರ್ಥಿಗಳಿಗೆ ಪುಷ್ಪವನ್ನು ನೀಡುವುದರ ಮೂಲಕ ಸ್ವಾಗತಿಸಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ 2024- 25ನೇ ಶೈಕ್ಷಣಿಕ ವರ್ಷದ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸಿರುವ ಯಶಸ್, ಪ್ರೇಕ್ಷ, ಫಾತಿಮತ್ ವಫಿಯ ಇವರನ್ನು ನೆರೆದಿರುವ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು. ಹಾಗೆಯೇ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಯಲ್ಲಿ ರಚನೆಯಾದ ಶಾಲಾ ಮಂತ್ರಿ ಮಂಡಲದ ನಾಯಕರುಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.