ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ ಜೂ. 13ರಂದು ನಡೆಯಿತು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲಾ ಕ್ರೀಡಾ ಸಂಘದ ವತಿಯಿಂದ 10 ದಿನದ ಉಚಿತ ಯೋಗ ತರಬೇತಿ ಶಿಬಿರವನ್ನು ಅಂತರಾಷ್ಟ್ರೀಯ ಯೋಗ ತರಬೇತುದಾರರು, ಯೋಗ ಗುರು ಕೆ.ಅಶೋಕ್ ಕುಮಾರ್ ಉದ್ಘಾಟಿಸಿದರು. ಯೋಗ ಶಿಬಿರದ ಉದ್ಘಾಟಕರಾಗಿ ಆಗಮಿಸಿ ನಮ್ಮ ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಆರೋಗ್ಯಯುತ ಜೀವನಕ್ಕೆ ಯೋಗ ಮತ್ತು ಪ್ರಾಣಾಯಾಮ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್l ಹೇಮಲತಾ ಎಂ. ಆರ್. ರವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಯೋಗ ತರಬೇತುಗಾರರಾಗಿ ಎಸ್.ಡಿ.ಎಮ್ ಬಿ.ಎನ್.ವೈ.ಎಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಸುಕೇತ, ಪ್ರಾಪ್ತಿ ಮತ್ತು ಕೀರ್ತನಾ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕ ಪ್ರವೀಣ್ ಎನ್. ಉಪಸ್ಥಿತರಿದ್ದರು. ಶಿಕ್ಷಕಿ ಗೀತಾ ಸ್ವಾಗತಿಸಿದರು, ನೀತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಚೇತನಾ ವಂದಿಸಿದರು.