ಉಜಿರೆ: ಓಡಲದಲ್ಲಿ ಜೂ.14ರಂದು ಸಂಜೆ ಸ್ಕೂಟರ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಸ್ಕೂಟರ್ ಸವಾರ ಉಜಿರೆಯಿಂದ ಬೆಳಾಲು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಕಾರಿಗೆ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಸ್ಕೂಟರ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.