ಉಜಿರೆ: ಬೆಳ್ತಂಗಡಿ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಅವರ ನೇತೃತ್ವದ ತಂಡ ಜೂ.14ರಂದು ರಾತ್ರಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.
ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು, ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆ ರಮೇಶ್ ಶೆಟ್ಟಿ, ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.