ಬೆಳ್ತಂಗಡಿ: ಜೂ.21ರಂದು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿಯ ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ವಹಿಸಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡ ಯೋಗವನ್ನು ನಮ್ಮ ಜೀವನದದಲ್ಲಿ ಅಳವಡಿಸಿಕೊಂಡು ಅದರ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿ ಮಕ್ಕಳಿಗೆ ಶುಭಹಾರೈಸಿದರು.
ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಹರೀಶ್, ಆಶಾಲತಾ ಮತ್ತು ಸುದೀಪ್ ಕಾರ್ಯಕ್ರಮವನ್ನು ಸಂಘಟಿಸಿದರು. ಸಹಶಿಕ್ಷಕಿ ಸುಮಲತ ಕಾರ್ಯಕ್ರಮವನ್ನು ನಿರೂಪಿಸಿದರು.