ಉರುವಾಲು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಉರುವಾಲು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ.ಆರ್. ದೀಪ ಬೆಳಗಿ ಉದ್ಘಾಟಿಸಿ, ಯೋಗಭ್ಯಾಸದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ದೈಹಿಕ ಶಿಕ್ಷಕಿ ವಿoದ್ಯಾ ಜೊತೆಗೂಡಿ ಒಂದು ಗಂಟೆಯ ಕಾಲ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳೆಲ್ಲರಿಗೂ ವಿವರಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಯೋಗದ ಕುರಿತಾಗಿ ಸಂಕಲ್ಪವನ್ನು ಕೈಗೊಂಡರು. ಶಿಕ್ಷಕ ವೃಂದದವರು ಹಾಜರಿದ್ದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

LEAVE A REPLY

Please enter your comment!
Please enter your name here