ಬೆಳ್ತಂಗಡಿ:ಜೂ. 21ರಂದು ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಪ್ರಾಂಶುಪಾಲ ಭಗಿನಿ ಮೋಲಿ ಅವರ ಮುಂದಾಳುತನದಲ್ಲಿ, ದೈಹಿಕ ನಿರ್ದೇಶಕ ಸಿರಾಜ್ ಅವರ ಮಾರ್ಗದರ್ಶನದಲ್ಲಿ, ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಭಂಗಿಯ ಯೋಗಾಸನಗಳನ್ನು ಮಾಡಿ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.