ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಕೆಂಪೇಗೌಡ ಜಯಂತಿ ಕಾರ್ಯಕ್ರಮ

0

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ಸಹಭಾಗಿತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಜೂ.27ರಂದು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪಟ್ಟಣ‌ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ ಶ್ರೀನಾಥ್, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ,ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಧ.ಮಂ.ಪ.ಪೂರ್ವ ಕಾಲೇಜಿನ ಉಪನ್ಯಾಸಕ‌ ಡಾ.ಮಹಾವೀರ ಜೈನ್ ಕೆಂಪೇಗೌಡ ದಿನಾಚರಣೆಯ ಕುರಿತು ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ಸ್ವಾಗತಿಸಿ, ಶಿಕ್ಷಕ ಧರಣೇಂದ್ರ ನಿರೂಪಿಸಿ, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here