ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಯೋಜಕ ಶಶಿ ಶೇಖರ್ ಎನ್., ಕಾಕತ್ಕರ್ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಆಗಮಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾಸಾಹೇಬ್ ಹಾಗೂ ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಯೋಜಕ ಎಸ್.ಎನ್. ಕಾಕತ್ಕರ್ ಸಂಘಟಿತ ಪ್ರಯತ್ನದಿಂದ ಏನನ್ನು ಕೂಡ ಸಾಧಿಸಬಹುದು, ಪೋಷಕರು ಮತ್ತು ಶಿಕ್ಷಕರ ನಿರಂತರ ಸಂಪರ್ಕದಲ್ಲಿ ಶಾಲೆ ಪ್ರಗತಿ ಹೊಂದಲು ಸಾಧ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಧನ್ಯ ಕುಮಾರ್ ಅವರು ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯು ಶಿಕ್ಷಣಕ್ಕೆ ಕೊಡುತ್ತಿರುವ ಆದ್ಯತೆಯನ್ನು ಪೋಷಕರಿಗೆ ತಿಳಿಸಿ, ಶಾಲೆಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಶಿಕ್ಷಣ ಸಂಸ್ಥೆ ನೀಡುತ್ತಾ ಬರುತ್ತಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪಗೌಡ ಈ ವರ್ಷ ಶಾಲೆಯಲ್ಲಿ ನಡೆಯುವ ಶಾಲಾ ಕಾರ್ಯಕ್ರಮದ ವಿವರವನ್ನು ಪೋಷಕರಿಗೆ ತಿಳಿಸಿದರು. ಶಾಲೆಯ ಶಿಕ್ಷಕ ರಕ್ಷಕ ಸಂಘಕ್ಕೆ ನೂತನ ಅಧ್ಯಕ್ಷರನ್ನು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶಶಿಧರ್ ಗುಂಪಕಲ್ ಅವರನ್ನು ಆರಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕರಿಸಿದರು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ನಿಶಾಂತ್ ನಿರೂಪಿಸಿದರು. ಪುಷ್ಪಲತಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here