
ಗಂಡಿಬಾಗಿಲು: ಉದಯ ಮಹಾಸಂಘದ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜು.1ರಂದು ಸಂತ ಥೋಮಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಉದಯ ಮಹಾಸಂಘದ ಉಪಾಧ್ಯಕ್ಷೆ ಮೇರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಅತಿಥಿಗಳಾಗಿ ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಅವರು ಪರಿಸರವನ್ನು ಉಳಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ನಿರ್ದೇಶಕ ಫಾ.ಬಿನೋಯಿ ಎ.ಜೆ. ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹಜ್ಯೋತಿ ತಾಲೂಕು ಒಕ್ಕೂಟ ಅಧ್ಯಕ್ಷೆ ಮಂಜುಳಾ ಜೋನ್, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್, ಗ್ರಾಮ ಪಂಚಾಯತ್ ಸದಸ್ಯೆ ಮರಿಯಮ್ಮ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ನಂತರ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಉಷಾ ಎಲ್ಲರನ್ನು ಸ್ವಾಗತಿಸಿದರು. ಮಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.