ರೆಖ್ಯ: ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ (75)ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ. ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ.
ಅವೈಜ್ಞಾನಿಕ ಕಾಮಗಾರಿಯ ವಿವರ: ಎಂಜಿರದಲ್ಲಿ ಸರ್ವಿಸ್ ರಸ್ತೆ ಮಾಡಿಲ್ಲ, ರಸ್ತೆ ಮದ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು / ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವಂತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ, ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ, ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್ ಗುಡ್ಡವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಿಲ್ಲ.
ಈ ಹಿನ್ನೆಲೆಯಲ್ಲಿ ಇದೇ ತಿಂಗಳ ಜು. 25ರ ಒಳಗೆ ಜನಪ್ರತಿನಿದಿಗಳು, ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸದಿದ್ದರೆ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ರೆಖ್ಯ ಗ್ರಾಮಸ್ಥರೆಲ್ಲರೂ ಮತ್ತು ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಜು. 31ರಂದು ಎಂಜಿರ ಜಂಕ್ಷನ್ ಬಳಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ನಮ್ಮ ಮನವಿಯನ್ನು ಸ್ವಿಕರಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಬೇಕು
ಇಲ್ಲದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ಕುಳಿತು ಪ್ರತಿಭಟನೆ ನಡೆಸುವುದಾಗಿ ಜು. 5ರಂದು ನಡೆಸಿದ ಪೂರ್ವ ಭಾವಿ ಸಭೆಯಲ್ಲಿ ತೀರ್ಮನಿಸಲಾಯಿತು.
ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಗುವ ಎಲ್ಲಾ ಸಮಸ್ಯೆಗಳಿಗೆ ಸರಕಾರವೇ ನೇರ ಹೊಣೆ ಎಂದು ಹೋರಾಟಗಾರರು ತಿಳಿಸಿದ್ದಾರೆ.