ಧರ್ಮಸ್ಥಳ: ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ-ಸರ್ಕಾರದಿಂದ ಹಣ ಬರದೆ ಚಿಂತಾಜನಕ ಸ್ಥಿತಿಯಲ್ಲಿ ನಾನಿದ್ದೇನೆ : ಶಾಸಕ ಹರೀಶ್ ಪೂಂಜ

0

ಧರ್ಮಸ್ಥಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ನೇತ್ರಾವತಿ ಸಭಾಂಗಣದಲ್ಲಿ ಜು.7ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಜನಸ್ಪಂದನ ಕಾರ್ಯಕ್ರಮ ಜನರು ಮಾತನಾಡುವ ಕಾರ್ಯಕ್ರಮ ಜನರು ಪರಿಹಾರ ಕಂಡುಕೊಳ್ಳುವ ಕಾರ್ಯಕ್ರಮ ಎಂದರು.

ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ಸರ್ಕಾರದಿಂದ ಯಾವುದೇ ರೀತಿಯ ಹಣ ಬರುತ್ತಿಲ್ಲ ಇದರಿಂದ ನಾನು ಚಿಂತಾ ಜನಕ ಸ್ಥಿತಿಯಲ್ಲಿ ಇದ್ದೇನೆ, ಪಂಚಾಯತ್ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿರುವುದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಎಂದರು.

ಈ ವೇಳೆ ತಹಶೀಲ್ದಾ‌ರ್ ಪೃಥ್ವಿ ಸಾನಿಕಾಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಧರ್ಮಸ್ಥಳ ಗ್ರಾ.ಪಂ.ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ್, ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಗ್ರಾ.ಪಂ. ಸದಸ್ಯರು, ಸಂಘದ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ಪರಿಹಾರ ನಿಧಿ ವಿತರಣೆ:ಮಳೆಗಾಲದಲ್ಲಿ ಹಾನಿಯಾಗಿದ್ದ 5 ಮನೆಗಳಿಗೆ ಚೆಕ್ ವಿತರಣೆ, ಬಡ ಕುಟುಂಬ ವೈದ್ಯಕೀಯ ವೆಚ್ಚಕ್ಕೆ , ಅಂತ್ಯಸಂಸ್ಕಾರಕ್ಕೆ ಹಾಗೂ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಚೆಕ್ ವಿತರಿಸಲಾಯಿತು.

ಶಾಸಕರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here