ಮುಂಡಾಜೆ: ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ನಾಲ್ಕು ಗ್ರಾಮಗಳಿಗೆ ಸಂಬಂಧಪಟ್ಟ ರಸ್ತೆಯು ಪೈಚಾರು-ದಿಡುಪೆ ರಾಜ್ಯ ಹೆದ್ದಾರಿಗೆ ಒಳಪಟ್ಟ ರಸ್ತೆಯಾಗಿದ್ದು, ಈ ರಸ್ತೆಯ ಚರಂಡಿಗಳನ್ನು ಕೆಲವು ವರ್ಷಗಳಿಂದ ಲೋಕೋಪಯೋಗಿ ಇಲಾಖೆಯಾಗಲಿ, ಗ್ರಾಮ ಪಂಚಾಯತ್ ಆಗಲೀ ಸರಿಯಾಗಿ ಕಾರ್ಯ ನಿರ್ವಹಿಸುವಲ್ಲಿ ಹಿಂದೇಟು ಹಾಕುತಿವೆ. ಈ ವಿಚಾರವಾಗಿ ಗ್ರಾಮ ಪಂಚಾಯತ್ ಸಭೆಗಳಲ್ಲಿ ಕೇಳಿದರೆ ಲೋಕೋಪಯೋಗಿ ಇಲಾಖೆಗೆ ಮನವಿ ನೀಡಿದರೂ ಯಾವುದೇ ರೀತಿಯ ಪ್ರತಿಕ್ರೀಯೆ ನೀಡುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.