ಬೆಳ್ತಂಗಡಿ: ಉಪ್ಪಿನಂಗಡಿ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ (30ವ) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಜು.8ರಂದು ಸಂಭವಿಸಿದೆ. ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ ದಿ. ನೀಲಯ್ಯ ಗೌಡ ಎಂಬವರ ಮಗನಾದ ಸುರೇಶ್ ಅವರು ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಈ ಕೃತ್ಯಗೈದಿರುವುದಾಗಿ ದೂರಲಾಗಿದೆ. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.